My Home

photo unavailable

ನಾನೊಬ್ಬ ಹಾಡುಗಾರ

ಹಾಡುಗಳೇ ನನ್ನ ಜೀವ, ಹಾಡುಗಳೇ ನನ್ನ ಭಾವ

Living in Bangalore, India

ಬಾರಿಸು ಕನ್ನಡ ಡಿಂಡಿಮವ

ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು

ಬಾರಿಸು ಕನ್ನಡ ಡಿಂಡಿಮವ ||

ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ

ಬಾರಿಸು ಕನ್ನಡ ಡಿಂಡಿಮವ ||

Tags: ಕುವೆಂಪು, ಡಿಂಡಿಮವ, ಬಾರಿಸು,

Followers (1)

Following (4)